ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಕಾರಣ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯೂ ಸುರಿಯುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜಧಾನಿಯೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಈ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - ಈಟಿವಿ ಭಾರತ ಕರ್ನಾಟಕ
ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಒಂಬತ್ತು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.
Etv BharatEtv Bharatರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ:ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಹಾಗು ತುಮಕೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಚಳಿ ಹಾಗೂ ಮಳೆಯಿಂದಾಗಿ ಶಾಲೆ, ಕಾಲೇಜು ಮತ್ತು ಕಚೇರಿಗಳಿಗೆ ತೆರಳುವ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.
ಇದನ್ನೂ ಓದಿ:ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣಕ್ಕೆ ವಾಹನ ಬಿಡುಗಡೆಗೆ ನಿರಾಕರಿಸುವಂತಿಲ್ಲ: ಹೈಕೋರ್ಟ್
Last Updated : Dec 26, 2022, 5:38 PM IST