ಕರ್ನಾಟಕ

karnataka

ETV Bharat / state

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರನ್ನು ಸನ್ಮಾನಿಸಿದ ಲಿಂಬಾವಳಿ - Chandrasekhar kambara honored with Padma Bhushan Award

ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅಭಿನಂದಿಸಿದರು.

Bhushan Award
ಲಿಂಬಾವಳಿ

By

Published : Jan 29, 2021, 6:19 PM IST

ಬೆಂಗಳೂರು: ಇತ್ತೀಚೆಗಷ್ಟೇ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅಭಿನಂದಿಸಿದರು.
ಬೆಂಗಳೂರಿನ ಬನಶಂಕರಿಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಕಂಬಾರರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಸನ್ಮಾನಿಸಿದರು.

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರನ್ನು ಸನ್ಮಾನಿಸಿದ ಲಿಂಬಾವಳಿ
ನಂತರ ಮಾತನಾಡಿದ ಸಚಿವ ಅರವಿಂದ ಲಿಂಬಾವಳಿ, ಚಂದ್ರಶೇಖರ ಕಂಬಾರರು ತಮಗೆ ಆತ್ಮೀಯರು ಹಾಗೂ ಮಾರ್ಗದರ್ಶಿಗಳು. ವಿಧಾನಸಭೆಯೊಳಗೆ ಹಾಗೂ ಹೊರಗೂ ನಮ್ಮಿಬ್ಬರ ಆತ್ಮೀಯತೆ ಇದೆ. ಅವರಿಗೆ ಪ್ರಶಸ್ತಿ ಲಭಿಸಿರೋದು ಹೆಮ್ಮೆಯ ಸಂಗತಿ ಎಂದರು.

ಡಾ. ಚಂದ್ರಶೇಖರ್ ಕಂಬಾರ ಮಾತನಾಡಿ, ಸಚಿವರಿಂದ ಸನ್ಮಾನ ಸ್ವೀಕರಿಸಿದ್ದು ಹಾಗೂ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದರು.

ABOUT THE AUTHOR

...view details