ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ - ಕಾನ್ಸ್‌ಟೇಬಲ್ ವರ್ಗಾವಣೆ ಬಗ್ಗೆ ಡಿಸಿಪಿ ನಿಶಾ ಜೇಮ್ಸ್ ಆದೇಶ
ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆ ಬದಲಾವಣೆಗೊಂಡಿದ್ದು, ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಆದೇಶಿಸಿದ್ದಾರೆ.
ಪೊಲೀಸ್ ಕಾನ್ಸ್‌ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ
ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್ಟೇಬಲ್ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಪಿಎಸ್‌ಐ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ : ಬರೋಬ್ಬರಿ 30.25 ಲಕ್ಷ ರೂ. ಕಳೆದುಕೊಂಡ ರೈತ