ಬೆಂಗಳೂರು:ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮದ ಸಮಯಗಳಲ್ಲಿ ಬದಲಾವಣೆಯಾಗಿದೆ.
ಡಿ.7 ರಿಂದ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳು ಈ ಬದಲಾವಣೆಯನ್ನು ಗಮನಿಸಿ ತರಗತಿಗಳ ಸದುಪಯೋಪಡಿಸಿ ಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ಆಗಸ್ಟ್ ನಿಂದಲೇ 8, 9, 10 ನೇ ತರಗತಿಗಳಿಗೆ ಸಂವೇದಾ ಪಾಠಗಳು ನಡೆಯುತ್ತಿವೆ. ಪ್ರಸ್ತುತ ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ತರಗತಿಗಳ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ-ಡಿ.ಎಸ್.ಇ.ಆರ್.ಟಿ ಬಿಡುಗಡೆ ಮಾಡಿದೆ.