ಕರ್ನಾಟಕ

karnataka

ETV Bharat / state

ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್

ಚೆಕ್ ಬೌನ್ಸ್ ಪ್ರಕರಣ-ವೈಎಸ್‌ವಿ ದತ್ತಾಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

YSV Datta
ವೈಎಸ್‌ವಿ ದತ್ತಾ

By

Published : Apr 15, 2023, 2:33 PM IST

ಬೆಂಗಳೂರು:ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ. ಏ.26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದ್ದಾರೆ.

ಕಳೆದ ವಿಚಾರಣೆಯಲ್ಲಿ ದತ್ತಾ ಅವರು, ಏ.15ರಂದು ದೂರುದಾರರಿಂದ ಪಡೆದುಕೊಂಡಿರುವ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ (ಶನಿವಾರ)ಇಂದು ಪಾವತಿ ಮಾಡಬೇಕಾಗಿತ್ತು. ವಿಚಾರಣೆ ವೇಳೆ ದತ್ತ ಅವರ ಪರ ವಕೀಲರು, ನಮ್ಮ ಕಕ್ಷಿದಾರರಿಗೆ ಖುದ್ದು ಹಾರಿಗೆ ವಿನಾಯಿತಿ ನೀಡುವಂತೆ ಕೋರಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ನಿರಾಕರಿಸಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದರು. ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಲಯ ಹಲವು ಬಾರಿ ವಾರಂಟ್ ನೀಡಿದ್ದರೂ ದತ್ತ ಹಾಜರಾಗಿರಲಿಲ್ಲ. ಅಲ್ಲದೇ, ಕಳೆದ ವಿಚಾರಣೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.

ಪ್ರಕರಣದ ಹಿನ್ನೆಲೆ:2022ರಲ್ಲಿ ದೂರುದಾರ ಸೋಮಶೇಖರ್ ಸೇರಿದಂತೆ ಇತರರು ದತ್ತಾ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇಂದು ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳಗಳು ಇದೇ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.

ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನುರಹಿತ ವಾರಂಟ್ :ಚೆಕ್‌ ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತೀಚೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾ.28 ರಂದು ಕೋರ್ಟ್‌ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್​ಪಿಗೆ ಸೂಚನೆ ನೀಡಿದೆ.

ಇದನ್ನೂ ಓದಿ:ಚೆಕ್‌ ಬೌನ್ಸ್‌: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನುರಹಿತ ವಾರಂಟ್

ABOUT THE AUTHOR

...view details