ಕರ್ನಾಟಕ

karnataka

ETV Bharat / state

ಅತಿಥಿ ಉಪನ್ಯಾಸಕರ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ದೇವೇಗೌಡರ ಮನವಿ - ಅತಿಥಿ ಉಪನ್ಯಾಸಕರ ಪರ ನಿಂತ ಜೆಡಿಎಸ್‍ ವರಿಷ್ಠ ಹೆಚ್.ಡಿ. ದೇವೇಗೌಡ

ಉನ್ನತ ಶಿಕ್ಷಣ ಇಲಾಖೆ ಆದೇಶದನ್ವಯ ಒಟ್ಟು 14,500 ಮಂದಿ ಅತಿಥಿ ಉಪನ್ಯಾಸಕರಿದ್ದು, ಈ ಆದೇಶದನ್ವಯ ಕೇವಲ 7,250 ಮಂದಿ ಅತಿಥಿ ಉಪನ್ಯಾಸಕರಿಗೆ ಅನುಕೂಲವಾಗಿದೆ. ಉಳಿದ 7.250 ಅತಿಥಿ ಉಪನ್ಯಾಸಕರು ಅವಕಾಶ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಈ ಹೊಸ ಆದೇಶವನ್ನು ಹಿಂಪಡೆದು 2019-2020 ನೇ ಸಾಲಿನ ಆದೇಶವನ್ನೇ ಮುಂದುವರೆಸುವಂತೆ ಹೆಚ್​ಡಿಡಿ ಕೋರಿದ್ದಾರೆ.

ಸರ್ಕಾರಕ್ಕೆ ದೇವೇಗೌಡರ ಮನವಿ
ಸರ್ಕಾರಕ್ಕೆ ದೇವೇಗೌಡರ ಮನವಿ

By

Published : Jan 21, 2022, 2:17 AM IST

ಬೆಂಗಳೂರು: ಅತಿಥಿ ಉಪನ್ಯಾಸಕರ ಮನವಿಯನ್ನು ಪರಿಶೀಲಿಸಿ, ಆಯಾ ಕಾಲೇಜುಗಳಲ್ಲಿ ಉದ್ಯೋಗ ಮುಂದುವರೆಸಲು ಅನುವು ಮಾಡಿಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ದೇವೇಗೌಡರ ಮನವಿ

ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ದೇವೇಗೌಡರು, ಉನ್ನತ ಶಿಕ್ಷಣ ಇಲಾಖೆ ಆದೇಶದನ್ವಯ ಒಟ್ಟು 14,500 ಮಂದಿ ಅತಿಥಿ ಉಪನ್ಯಾಸಕರಿದ್ದು, ಈ ಆದೇಶದನ್ವಯ ಕೇವಲ 7,250 ಮಂದಿ ಅತಿಥಿ ಉಪನ್ಯಾಸಕರಿಗೆ ಅನುಕೂಲವಾಗಿದೆ. ಉಳಿದ 7.250 ಅತಿಥಿ ಉಪನ್ಯಾಸಕರು ಅವಕಾಶ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಈ ಹೊಸ ಆದೇಶವನ್ನು ಹಿಂಪಡೆದು 2019-2020 ನೇ ಸಾಲಿನ ಆದೇಶವನ್ನೇ ಮುಂದುವರೆಸುವಂತೆ ಕೋರಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ಉದ್ಯೋಗವನ್ನೇ ನಂಬಿ ಜೀವನ ನಡೆಸುತ್ತಿರುವ ಉಪನ್ಯಾಸಕರ ಪರಿಸ್ಥಿತಿ ತುಂಬಾ ಕಷ್ಟಕರವಾಗಿದೆ. ಆದುದರಿಂದ ಅತಿಥಿ ಉಪನ್ಯಾಸಕರ ಮನವಿಯನ್ನು ಪರಿಶೀಲಿಸಿ, ಆಯಾ ಕಾಲೇಜುಗಳಲ್ಲಿ ಉದ್ಯೋಗ ಮುಂದುವರೆಸಲು ಅನುವು ಮಾಡಿಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಿರೆಂದು ಆಶಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details