ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ - ಹಂಸಲೇಖ
ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರು ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾದಬ್ರಹ್ಮ ಹಂಸಲೇಖ
ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿಯಲಿದ್ದಾರೆ.