ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವು ಪ್ರಕರಣದ ಕುರಿತು ಈಗಾಗಲೇ ತನಿಖೆ ಚುರುಕುಗೊಂಡಿದೆ. ಯುವ ನಟಿ ಫ್ಯಾಟ್ ಸರ್ಜರಿ ವೆಚ್ಚ ಭರಿಸಲು ತನ್ನ ಮೈಮೇಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟಿದ್ದರು ಎಂಬ ವಿಚಾರ ಆಕೆಯ ಸ್ನೇಹಿತರ ವಿಚಾರಣೆ ವೇಳೆ ತಿಳಿದುಬಂದಿದೆ.
ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಚೇತನಾಳ ಆಪ್ತ ವಲಯದಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಟ್ರೈನರ್ ಸಲಹೆಯಂತೆ ಚೇತನಾ ರಾಜ್ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಿಂದ ತನ್ನ ಬಳಿಯಿದ್ದ ಚಿನ್ನಾಭರಣ ಅಡವಿಟ್ಟು 80 ಸಾವಿರ ರೂಪಾಯಿ ಪಡೆದುಕೊಂಡಿದ್ದ ಯುವನಟಿ, ಅದೇ ಹಣವನ್ನ ಡಾ.ಶೆಟ್ಟಿ ಕಾಸ್ಮೆಟಿಕ್ನಲ್ಲಿ ಪಾವತಿಸಿದ್ದರು ಎಂಬ ವಿಚಾರ ಬಯಲಾಗಿದೆ.