ಬೆಂಗಳೂರು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಖಾಸಗಿ ಆಸ್ಪತ್ರೆಗಳ ಶೇ50 ರಷ್ಟು ಬೆಡ್‌ಗಳನ್ನು ಸರ್ಕಾರಕ್ಕೆ ಒಪ್ಪಿಸಲು ಆದೇಶಿಸಿದೆ. ಬೆಡ್ ಹೆಚ್ಚಳ, ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗ್ತಿರುವ ಸಂಬಂಧ ಇಂದು ಸಿಎಂ ಎಲ್ಲಾ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
ಸಿಎಂ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಹಾಗೂ ಇಡೀ ರಾಜ್ಯಕ್ಕೆ ಸಂಬಂಧಪಟ್ಟಂತೆ ಕೋವಿಡ್ ಕುರಿತು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಏನೇನು ಕ್ರಮ ಕೈಗೊಳ್ಳಬೇಕೆಂಬ ವಿವರ, ಪ್ರಸ್ತಾವನೆಗಳನ್ನು ಸಿಎಂ ಮುಂದೆ ಇಡಲಾಗಿದೆ ಎಂದರು.
ಬೆಡ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ:
ನಗರ ಮಟ್ಟದಲ್ಲಿ ಇರುವ ಹಾಸಿಗೆಗಳನ್ನು ಯಾವ ರೀತಿ ಹೆಚ್ಚಿಸಬೇಕೆಂಬ ಸಭೆ ಆಗಿದೆ. ಜೊತೆಗೆ ಖಾಸಗಿ ಆಸ್ಪತ್ರೆಗಳ್ಳಲ್ಲಿ ಇರುವ ಹಾಸಿಗೆಗಳನ್ನು ಸರ್ಕಾರಕ್ಕೆ ಒಪ್ಪಿಸಿಬಿಡುವ ಬಗ್ಗೆ ಚರ್ಚೆ ನಡೆದಿದೆ. ಖಾಸಗಿ ಆಸ್ಪತ್ರೆ, ಖಾಸಗಿ ಹೋಟೇಲ್ಗಳು ಸೇರಿ, ತಾತ್ಕಾಲಿಕ ಆಸ್ಪತ್ರೆಗಳ ನಿರ್ಮಾಣದ ಬಗ್ಗೆಯೂ ಪ್ರಸ್ತಾವನೆ ನೀಡಲಾಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳಿಂದ ಈಗಾಗಲೇ 4,500 ರಷ್ಟು ಹಾಸಿಗೆಗಳು ಬಂದಿವೆ. ಎಲ್ಲಾ ಪಾಸಿಟಿವ್ ರೋಗಿಗಳು ಆಸ್ಪತ್ರೆ ಸೇರುವ ಅಗತ್ಯ ಇಲ್ಲ. ಸೋಂಕು ಲಕ್ಷಣ ಇದ್ದರೆ ಮಾತ್ರ ಆಸ್ಪತ್ರೆ ಅಗತ್ಯವಿದೆ. ಹೋಂ ಐಸೋಲೇಷನ್ನಲ್ಲಿ ಇರುವವರು 1912 ಸಹಾಯವಾಣಿಗೆ ಕರೆ ಮಾಡಿ ಅಗತ್ಯ ಸಲಹೆ ಪಡೆಯಬಹುದು ಎಂದು ತಿಳಿಸಿದರು.