ಕರ್ನಾಟಕ

karnataka

ETV Bharat / state

ಸಿಎಂ ವಿರುದ್ಧ ದೂರು ದಾಖಲು: ಚುನಾವಣಾಧಿಕಾರಿ ಸಂಜೀವ್ ಕುಮಾರ್ - ಚುನಾವಣಾ ಆಯೋಗ ಕಚೇರಿ ಸುದ್ದಿಗೋಷ್ಟಿ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮುದಾಯದ ಮತದಾರರಿಗೆ ಆಮಿಷ ಒಡ್ಡಿದ ಆರೋಪ ಸಂಬಂಧ ದೂರು ಬಂದಿದೆ. ಈ ಬಗ್ಗೆ ಸಿಎಂ ವಿರುದ್ಧ ದೂರು ಸ್ವೀಕರಿಸಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

Sanjeev Kumar
ಸಂಜೀವ್ ಕುಮಾರ್

By

Published : Dec 2, 2019, 5:26 PM IST

Updated : Dec 2, 2019, 5:46 PM IST

ಬೆಂಗಳೂರು:ವೀರಶೈವ ಲಿಂಗಾಯತ ಸಮುದಾಯದ ಮತದಾರರ ಒಂದು ಮತವೂ ಬಿಜೆಪಿ ಬಿಟ್ಟು ಆ ಕಡೆ ಈ ಕಡೆ ಹೋಗುವಂತಿಲ್ಲ ಎಂದು ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮುದಾಯದ ಮತದಾರರಿಗೆ ಆಮಿಷ ಒಡ್ಡಿದ ಆರೋಪ ಸಂಬಂಧ ದೂರು ಬಂದಿದೆ ಸಿಎಂ ವಿರುದ್ಧ ದೂರು ಸ್ವೀಕರಿಸಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದರು.

ಚುನಾವಣಾ ಅಕ್ರಮದ ಮೇಲೆ ಆಯೋಗ ಹದ್ದಿನ‌ ಕಣ್ಣಿಟ್ಟು, ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ದೂರು ದಾಖಲು ಮಾಡುತ್ತಿದೆ. ಯಾವುದೇ ರೀತಿಯ ಆಮಿಷ ಒಡ್ಡುವ ಮಾಹಿತಿ ಸಿಕ್ಕಲ್ಲಿ ಆಯೋಗದ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮಂತ್ರಿ ಮಾಡುತ್ತೇನೆ ಎನ್ನುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ:

ಉಪ ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳ ಗೆಲ್ಲಿಸಿ ಅವರು ಮಂತ್ರಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡುತ್ತಿರುವ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವ್ಯಾಪ್ತಿಗೆ ಬರುವುದಿಲ್ಲ, ಸಚಿವ ಸ್ಥಾನ ನೀಡುವ ಭರವಸೆ ನೀತಿ ಸಂಹಿತೆ ಉಲ್ಲಂಘನೆ ಅಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದರು.

ಪ್ರತಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಬಿಂಬಿಸಿ ಮತ ಯಾಚನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಅದೇ ರೀತಿ ಇದೂ ಕೂಡ ಆಗಲಿದೆ ಹಾಗಾಗಿ ನೀತಿ ಸಂಹಿತೆ ಉಲ್ಲಂಘನೆ ಆಗಲ್ಲ ಎಂದು ಸ್ಪಷ್ಟಪಡಿಸಿದರು.

Last Updated : Dec 2, 2019, 5:46 PM IST

ABOUT THE AUTHOR

...view details