ಬೆಂಗಳೂರು:ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ ವೀರ ಮರಣವನ್ನಪ್ಪಿದ ಭಾರತೀಯ ಯೋಧರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮನ ಸಲ್ಲಿಸಿದ್ದಾರೆ.
ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಸಿಎಂ ಬಿಎಸ್ವೈ - Chief Minister BS Yadiyurappa
ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು ಎಂದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ ಎಂದರು.
ಇನ್ನು ಭಾರತದ ಸೈನಿಕರಿಗೆ ನಮ್ಮೆಲ್ಲರ ನೈತಿಕ ಬೆಂಬಲ ಯಾವತ್ತೂ ಇರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.