ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು - corona news

ಸಿಎಂ ಬಿ.ಎಸ್​.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

By

Published : Aug 3, 2020, 12:00 AM IST

Updated : Aug 3, 2020, 12:07 AM IST

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾಲ್ಕು ಬಾರಿ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಐದನೇ ಬಾರಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ‌, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್​ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿದ್ದಾರೆ.

ಈಗಾಗಲೇ ಸಿಎಂ ಸಂಪುಟದಲ್ಲಿನ ಸಿ.ಟಿ. ರವಿ, ಬಿ.ಸಿ. ಪಾಟೀಲ್​ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸಿಎಂ ಸೇರಿದಂತೆ ಹಲವು ಸಚಿವರು ಹೋಮ್​ ಕ್ವಾರಂಟೈನ್ ಆಗಿದ್ದಾರೆ.

Last Updated : Aug 3, 2020, 12:07 AM IST

ABOUT THE AUTHOR

...view details