ಬೆಂಗಳೂರು:ತಮ್ಮ ತಮ್ಮ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಪ್ರಧಾನಿ ಮೋದಿ ನಂಬಿಕೆ ಉಳಿಸಿಕೊಳ್ಳಬೇಕು ಎಂದು ರಾಜ್ಯದಿಂದ ಕೇಂದ್ರ ಸಚಿವ ಸಂಪುಟಕ್ಕೆ ಸೇರಿರುವ ನೂತನ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದರು.
ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು, ನೂತನ ಸಚಿವರು ಭೇಟಿ ಮಾಡಿದರು. ಕರ್ನಾಟಕ ಭವನಕ್ಕೆ ಆಗಮಿಸಿದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್ ಹಾಗು ಎ.ನಾರಾಯಣ ಸ್ವಾಮಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ವರಿಷ್ಠರು ಕಲ್ಪಿಸಿದ ಅವಕಾಶಕ್ಕಾಗಿ ಯಡಿಯೂರಪ್ಪ ಅವರಿಗೂ ಧನ್ಯವಾದ ಹೇಳಿದರು.