ಕರ್ನಾಟಕ

karnataka

ETV Bharat / state

ಕುತೂಹಲ ಮೂಡಿಸಿದ ಸಿಎಂ-ಖರ್ಗೆ ಭೇಟಿ... ಮತ್ತೆ ರಾಜ್ಯ ರಾಜಕೀಯಕ್ಕೆ ಖರ್ಗೆ ಎಂಟ್ರಿ..? - undefined

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ದ ಪರಾಭವಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ರಾಜಕೀಯಕ್ಕೆ ಬರುವಂತೆ ಸಿಎಂ ಮನವಿ ಮಾಡಿದ್ದಾರೆ.

ಸಿಎಂ ಖರ್ಗೆ ಭೇಟಿ

By

Published : Jun 20, 2019, 4:06 AM IST

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ದ ಪರಾಭವಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ರಾಜಕೀಯಕ್ಕೆ ಬರುವಂತೆ ಸಿಎಂ ಮನವಿ ಮಾಡಿದ್ದಾರೆ.

ದೋಸ್ತಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರ್ಯಾಯವಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಸಿಎಂ ಅವರು ಖರ್ಗೆ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಪ್ರಾಮುಖ್ಯತೆ ಕಡಿಮೆ ಮಾಡುವ ರಾಜಕೀಯ ತಂತ್ರಗಾರಿಕೆಯ ಒಂದು ಭಾಗವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗ ಶಾಸಕರಿಂದ ಮೈತ್ರಿ ಸರಕಾರಕ್ಕೆ ಅಪಾಯವಾಗುವುದನ್ನು ತಪ್ಪಿಸಲು ಖರ್ಗೆಯವರನ್ನು ರಾಜ್ಯ ರಾಜಕೀಯಕ್ಕೆ ತರಲು ಕುಮಾರಸ್ವಾಮಿ ಯತ್ನ ನಡೆಸಿದ್ದಾರೆನ್ನಲಾಗುತ್ತಿದೆ.

ಮಾಜಿ ಪ್ರಧಾನಿ ದೇವೇಗೌಡರು ಸಹ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ರಾಜಕೀಯಕ್ಕೆ ಬಂದರೆ ಮೈತ್ರಿ ಸರಕಾರದ ಭದ್ರತೆಗೆ ಹೆಚ್ಚು ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯ ಹೊಂದಿದ್ದು, ಈ ಸಂಗತಿಯನ್ನು ಸಹ ಭೇಟಿ ಸಂದರ್ಭದಲ್ಲಿ ಖರ್ಗೆ ಗಮನಕ್ಕೆ ಸಿಎಂ ತಂದಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧಿಗಳು, ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯ ರಾಜಕೀಯಕ್ಕೆ ತರಲು ಆಸಕ್ತಿ ಹೊಂದಿದ್ದು ಅದಕ್ಕೆ ವೇದಿಕೆ ಸಿದ್ದಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸಿರುವುದು ಖರ್ಗೆ ಅವರ ರಾಜ್ಯ ರಾಜಕೀಯ ಪರ್ವ ಮತ್ತೊಮ್ಮೆ ಆರಂಭವಾಗುವ ಮುನ್ಸೂಚನೆ ನೀಡಿದೆ.

For All Latest Updates

TAGGED:

ABOUT THE AUTHOR

...view details