ಕರ್ನಾಟಕ

karnataka

ETV Bharat / state

ಜೆಡಿಎಸ್ ಬಿಟ್ರು, ಕಾಂಗ್ರೆಸ್ 'ಕೈ'ಹಿಡಿದ್ರು, ಚಿಕ್ಕಬಳ್ಳಾಪುರದ ಹತ್ತಕ್ಕೂ ಹೆಚ್ಚಿನ ಮುಖಂಡರು. - ಉಪ ಚುನಾವಣೆ

ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಜೆಡಿಎಸ್ ಮುಖಂಡರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಕೈಹಿಡಿದ ಚಿಕ್ಕಬಳ್ಳಾಪುರ ಮುಖಂಡರು

By

Published : Sep 18, 2019, 10:14 PM IST

ಬೆಂಗಳೂರು: ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಜೆಡಿಎಸ್ ಮುಖಂಡರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸಮ್ಮುಖದಲ್ಲಿ ಹತ್ತಕ್ಕೂ ಹೆಚ್ಚು ಮುಖಂಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಕೈ ಹಿಡಿದಿದ್ದು,ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದಿಂದ ಎಲ್ಲವನ್ನೂ ಪಡೆದು ಮೋಸ ಮಾಡಿದ್ದಾರೆ. ಅಂತವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಅನರ್ಹ ಶಾಸಕ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ

ನಂತರ ಶಿವಶಂಕರ್ ರೆಡ್ಡಿ ಮಾತನಾಡಿ, ಇದು ಪಕ್ಷಕ್ಕೆ ಸೇರ್ಪಡೆಯಾಗುವ ಕಾರ್ಯದ ಆರಂಭ, ಮುಂದೆ ನಾವೆಲ್ಲರೂ ಸೇರಿ ಪಕ್ಪದ ಯಶಸ್ಸಿಗೆ ಶ್ರಮಿಸಬೇಕು ಎಂದಿದ್ದಾರೆ. ಅಲ್ಲದೇ, ಉಪ ಚುನಾವಣೆ ಎದುರಾದರೆ ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಸೋಲು ಖಚಿತ ಎಂದಿದ್ದು, ಕಾಂಗ್ರೆಸ್ ಮತ್ತೊಮ್ಮೆ ಇಲ್ಲಿ ಗೆಲುವು ಸಾಧಿಸಲಿದೆ ಎಂದರು.

ABOUT THE AUTHOR

...view details