ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಕ್ರೈಂ ನಿಯಂತ್ರಣ, ಮಹಿಳೆ - ಮಕ್ಕಳ ಮೇಲೆ ದೌರ್ಜನ್ಯ ಪ್ರಮಾಣ ಸೇರಿದಂತೆ ವಿವಿಧ ರೀತಿಯ ಅಪರಾಧಗಳನ್ನು ತಡೆಯುವುದೇ ನನ್ನ ಮೊದಲ ಆದ್ಯತೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಕ್ರೈಂ ತಡೆಯುವುದೇ ನನ್ನ ಮೊದಲ ಗುರಿ: ನೂತನ ಪೊಲೀಸ್ ಆಯುಕ್ತರ ಖಡಕ್ ನುಡಿ - ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಚಿಟ್ಚಾಟ್,
ಕ್ರೈಂ ತಡೆಯುವುದೇ ನನ್ನ ಮುಖ್ಯ ಉದ್ದೇಶವಾಗಿದೆ ಎಂದು ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಟಿವಿ ಭಾರತದೊಂದಿಗೆ ಮಾತನಾಡಿದ ಆಯುಕ್ತರು. ಸೈಬರ್ ಕ್ರೈಂ ಹೆಚ್ಚಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಕಡಿಮೆ ಮಾಡಲು ಖಾಸಗಿ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಈಗಾಗಲೇ ಕೆಲವು ಸಂಸ್ಥೆಗಳು ಮುಂದೆ ಬಂದಿವೆ ಎಂದರು.
ನಗರದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಅಧಿಕವಾಗುತ್ತಿದೆ. ಇಂತಹ ಶೋಷಣೆ ಎಸಗುವ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗದಂತೆ ಮಾಡಲು ನಮ್ಮ ಪೊಲೀಸರು ಕೆಲಸ ಮಾಡಬೇಕಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಶಾಘ್ಲನೆ ವ್ಯಕ್ತಪಡಿಸಿ ಧೈರ್ಯವಾಗಿ ಕೆಲಸ ಮಾಡಿ ಎಂದು ಭರವಸೆ ನೀಡಿದರು.