ಬೆಂಗಳೂರು:ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಸಹಕಾರ ಬ್ಯಾಂಕ್ನಲ್ಲಿ ನಡೆದ ಭಾರಿ ಅವ್ಯಹಾರ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ನಗರದ 15 ಕಡೆ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ನಲ್ಲಿ ಸುಳ್ಳು ದಾಖಲೆ ನೀಡಿ ಕೋಟಿ - ಕೋಟಿ ಸಾಲ ಪಡೆದವರು ಹಾಗೂ ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ ಹದಿನೈದು ಕಡೆಗಳಲ್ಲಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.
ಬ್ಯಾಂಕ್ನಲ್ಲಿ ಕೋಟಿ ಕೋಟಿ ಅವ್ಯಹಾರ ನಡೆದಿರುವ ಕಾರಣ ಇತ್ತೀಚೆಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿ ತನಿಖೆ ಮುಂದುವರೆಸಿದಾಗ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಮಾಜಿ ಸಿಇಒ ವಾಸುದೇವ್ ಮಯ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.