ಬೆಂಗಳೂರು:45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸುವ ರಾಜ್ಯ ಸರ್ಕಾರದ ಅಭಿಯಾನದ ಜೊತೆ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ ಕರ್ನಾಟಕ) ಕೈಜೋಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕ್ ಚಂದ್ರ ಮಾತನಾಡಿ, ಸರ್ಕಾರ ಎಲ್ಲ ಸಂಸ್ಥೆಗಳಿಗೂ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುತ್ತಿದೆ. ಈ ಲಸಿಕೆಯನ್ನು ಪಡೆಯಬೇಕು ಎಂದು ಹೇಳಿದರು.