ಬೆಂಗಳೂರು:ಡಿ.ಜೆ.ಹಳ್ಳಿ ಹಾಗೂ ಚಾಮಾರಾಜಾಪೇಟೆ ಬಳಿಯ ಸಿಸಿಬಿ ಕಚೇರಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಸದ್ಯ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಸಿಟಿಜನ್ ಫಾರ್ ಡೆಮಾಕ್ರಸಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ನಿವೃತ್ತ ಐಎಫ್ಎಸ್ ಅಧಿಕಾರಿ ರಾಜು, ಆರ್.ಕೆ.ಮುತ್ತು ಅವರನ್ನೊಳಗೊಂಡ ತಂಡ ಗಲಭೆ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸುತ್ತಿದೆ. ಈ ತಂಡ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ.