ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಸದ್ಯ ಪೊಲೀಸರಲ್ಲಿ ಕೂಡ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಮತ್ತೊಂದೆಡೆ ಸರ್ಕಾರ ಸೀಲ್ ಡೌನ್ ಹಾಗೂ ಕಂಟೇನ್ಮೆಂಟ್ ಏರಿಯಾವನ್ನ ಹೆಚ್ಚಳ ಮಾಡಿದ ಕಾರಣ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವೀಟ್ ಮೂಲಕ ಜನತೆಗೆ ಸಲಹೆಗಳನ್ನು ನೀಡಿದ್ದಾರೆ.
ಬೆಂಗಳೂರು ಜನರಿಗೆ ನಗರ ಪೊಲೀಸ್ ಆಯುಕ್ತರು ನೀಡಿದ ಸಲಹೆ ಏನು ಗೊತ್ತಾ..? - ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಸುದ್ದಿ
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ತಾಂಡವಾಡುತ್ತಿದ್ದು ನಗರದ ಜನತೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವೀಟ್ ಮೂಲಕ ಸಲಹೆ ನಿಡಿದ್ಧಾರೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್
ಬೆಂಗಳೂರು ಪೊಲೀಸರ ಜೊತೆ ನಗರದಲ್ಲಿ ವಾಸಿಸುವ ಜನರು ಕೂಡ ಕೊರೊನಾ ವಾರಿಯರ್ಸ್ ಆಗಬೇಕು. ಎಲ್ಲಾ ಸಂಸ್ಥೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕೊರೊನಾ ವಾರಿಯರ್ಸ್ ಆಗಿ ಮಾಸ್ಕ್ ಕಡ್ಡಾಯವಾಗಿ ಹಾಕುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಇವೆಲ್ಲವನ್ನ ಅಚ್ಚುಕಟ್ಟಾಗಿ ಮಾಡಿದ್ದಲ್ಲಿ ನೀವೆಲ್ಲಾ ಕೊರೊನಾ ವಾರಿಯರ್ಸ್ ಆಗಬಹುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.