ಕೆಆರ್ಪುರ:ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿಜಿನಾಪುರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ.
ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ.. ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ - ಬೆಂಗಳೂರು
ಸೈಯದ್ ಇಮ್ರಾನ್ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.
ಮಾರಣಾಂತಿಕ ಹಲ್ಲೆ
ಸೈಯದ್ ಇಮ್ರಾನ್ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ಕಾರ್ಯಕರ್ತರು ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿದ್ದು, ಬಿಜೆಪಿ ಕಾರ್ಯಕರ್ತರು ನಹೀಂ ಎಂಬ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬೂತ್ ಬಳಿ ಬಂದ ಕಾರಣಕ್ಕೆ ಉಭಯ ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಜಿನಾಪುರ ವಾರ್ಡ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.