ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರುವ ಫಲಕಗಳೂ ಸೇರಿದಂತೆ ನಗರದ ಹಲವು ರಸ್ತೆಗಳಲ್ಲಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಪಾಲಿಕೆ ಮಾಹಿತಿ ನೀಡಿದೆ. ಜಂಟಿ ಆಯುಕ್ತರ ನೇತೃತ್ವದಲ್ಲಿ 2 ವಲಯಗಳಲ್ಲಿ 200 ಸಿಬ್ಬಂದಿಯ ತಂಡ ವಿಶೇಷ ಅಭಿಯಾನ ನಡೆಸಿ 5,000ಕ್ಕೂ ಹೆಚ್ಚು ಬ್ಯಾನರ್‌ಗಳನ್ನು ತೆರವುಗೊಳಿಸಿದೆ ಎಂದು ಬಿಬಿಎಂಪಿ (ಕಂದಾಯ) ವಿಶೇಷ ಆಯುಕ್ತ ದೀಪಕ್ ತಿಳಿಸಿದರು.
ಈ ಬಾರಿ ಅಕ್ರಮ ಬ್ಯಾನರ್‌ಗಳ ಪತ್ತೆಗೆ ಜಿಪಿಎಸ್ ಕ್ಯಾಮೆರಾಗಳನ್ನು ಬಳಕೆ ಮಾಡಲಾಗಿದೆ. ಹೈಕೋರ್ಟ್ ಆದೇಶದ ಹೊರತಾಗಿಯೂ ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ಗಳು ಹೆಚ್ಚಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷವಾಗಿ ರಾಜಕೀಯ ಮುಖಂಡರನ್ನು ಸ್ವಾಗತಿಸುವ ಬ್ಯಾನರ್‌ಗಳನ್ನು ಹಾಕುವವರ ವಿರುದ್ಧ ಪಾಲಿಕೆ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.