ಬೆಂಗಳೂರು: ನಗರದ ನಾಗರಬಾವಿ ಬಡಾವಣೆಯ ಸರ್ವೇ ನಂಬರ್ 30ರಲ್ಲಿ ಜಿಲ್ಲಾಡಳಿತದಿಂದ ಬಿಡಿಎಗೆ ಹಸ್ತಾಂತರಿಸಿದ್ದ ಜಾಗದಲ್ಲಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು: 2 ಎಕರೆ ಜಾಗ ವಶ
ಬೆಂಗಳೂರಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬಿಡಿಎ ಅಧಿಕಾರಿಗಳ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು
ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್ಗಳು ಮತ್ತು ಕಾಂಪೌಂಡ್ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶದ ಅನುಸಾರ ಕಾರ್ಯಾಚರಣೆ ನಡೆಸಲಾಗಿದೆ.
ಒಟ್ಟು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹಾಗೂ ಬಿಡಿಎ ಮೂಲಗಳು ತಿಳಿಸಿವೆ.