ಕರ್ನಾಟಕ

karnataka

ನೆರೆಪೀಡಿತ ಜಿಲ್ಲೆಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

By

Published : Aug 22, 2020, 1:09 PM IST

ನೆರೆ‌ಪೀಡಿತ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಮಂಗಳವಾರ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

Yediyurappa
Yediyurappa

ಬೆಂಗಳೂರು: ಸಿಎಂ ಯಡಿಯೂರಪ್ಪ ಮಂಗಳವಾರ ನೆರೆ‌ಪೀಡಿತ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಭೇಟಿ ನೀಡಲಿರುವ ಸಿಎಂ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನೆರೆ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ.

ಬಳಿಕ ಬೆಳಗಾವಿಯಿಂದ ಐಎಎಫ್ ಹೆಲಿಕಾಪ್ಟರ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಧ್ಯಾಹ್ನ ಸಿಎಂ ವಿಜಯಪುರ ಜಿಲ್ಲೆಯ ಆಲಮಟ್ಟಿಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತಿ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಆಲಮಟ್ಟಿ ಅಣೆಕಟ್ಟು ಆವರಣದ ಹೆಲಿಪ್ಯಾಡ್ ನಿಂದ ಐಎಎಫ್ ಹೆಲಿಕಾಪ್ಟರ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಸಿಎಂ ಪ್ರವಾಸ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಚಿವರು, ಶಾಸಕರು, ಸಂಸದರು ಹಾಗೂ ಹಿರಿಯ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ABOUT THE AUTHOR

...view details