ಬೆಂಗಳೂರು:ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಪ್ರವಾಸ ಮಾಡಲಿದ್ದು, ಅಕ್ಟೋಬರ್ 3ರಿಂದ 5ರವರೆಗೆ ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಗೆ ಭೇಟಿ ನೀಡಲಿದ್ದಾರೆ.
ಅ.3ರಂದು ಸಿಎಂ, ಬೆಂಗಳೂರಿನಿಂದ ವಿಮಾನದ ಮೂಲಕ ಬೆಳಗಾವಿಗೆ ಪ್ರಯಾಣ ಬೆಳಸಲಿದ್ದು, ನಂತರ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅಂದು ರಾತ್ರಿ ಬೆಳಗಾವಿಯ ಸರ್ಕಿಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.4ರಂದು ಬೆಳಗಾವಿಯಲ್ಲಿ ಸಾರ್ವಜನಿಕರಿಂದ ಕುಂದು-ಕೊರತೆಗಳನ್ನು ಆಲಿಸಿ, ನಂತರ ಅಥಣಿಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.