ಕರ್ನಾಟಕ

karnataka

ETV Bharat / state

ಸುಧಾಮೂರ್ತಿ ಹುಟ್ಟುಹಬ್ಬ: ಸಿಎಂ, ಬಿಜೆಪಿ ನಾಯಕರಿಂದ ಶುಭಾಶಯ - ಬೆಂಗಳೂರು

ಇನ್ಫೋಸಿಸ್ ಫೌಂಡೇಷನ್ ಸಂಸ್ಥಾಪಕಿ ಸುಧಾಮೂರ್ತಿ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ, ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

BJP leaders tweet
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Aug 19, 2020, 2:39 PM IST

ಬೆಂಗಳೂರು:ಇನ್ಫೋಸಿಸ್ ಫೌಂಡೇಷನ್ ಸಂಸ್ಥಾಪಕಿ ಸುಧಾಮೂರ್ತಿ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

ಕೋವಿಡ್‌ಗೆ ನೆರವು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳಿಂದ ಶ್ಲಾಘನೀಯ ಸೇವೆ ಸಲ್ಲಿಸುತ್ತಿರುವ ಸುಧಾಮೂರ್ತಿ ಅವರಿಗೆ ಜನ್ಮದಿನದ ಶುಭಾಶಯ. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುವುದಾಗಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಾಮಾಜಿಕ, ಆರ್ಥಿಕ, ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಾವು ನಡೆಸಿರುವ ಧರ್ಮಕಾರ್ಯ ಸುದೀರ್ಘವಾಗಿ ಮುಂದುವರಿಯಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸುಧಾಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಬಹುರೂಪಿ ವ್ಯಕ್ತಿತ್ವ, ತಮ್ಮ ಅಸಂಖ್ಯಾತ ಸಮಾಜಮುಖಿ ಕಾರ್ಯಗಳ ಮೂಲಕ ನಾಡಿಗೆ ಆದರ್ಶವಾಗಿರುವ ನೀವು ನಮ್ಮ ಹೆಮ್ಮೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಟ್ವೀಟ್ ಮಾಡಿದ್ದಾರೆ.

ತಮ್ಮ ಜನ ಸೇವೆ ಹೀಗೆಯೇ ಮುಂದುವರೆಯಲಿ, ಭಗವಂತ ನಿಮಗೆ ಉತ್ತಮ ಆರೋಗ್ಯ ಹಾಗೂ ಆಯುಷ್ಯ ನೀಡಿ ಆಶೀರ್ವದಿಸಲಿ ಎಂದು ಶ್ರೀರಾಮುಲು ಹಾರೈಸಿದ್ದಾರೆ.

ಕನ್ನಡನಾಡಿನ ಹೆಮ್ಮೆಯ ಪುತ್ರಿ, ಮಮತೆ ವಾತ್ಸಲ್ಯಗಳ ಸಾಕಾರ ಮೂರ್ತಿ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‌

ಸರಳ ಜೀವನ ಹಾಗು ವಿಶಿಷ್ಟ ಅಂಕಣಗಳ ಮೂಲಕ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದೀರಿ ಎಂದು ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details