ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ದಲಿತ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಯಿತು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ ನಡೆದ ಸಭೆಯಲ್ಲಿ ಆಯವ್ಯಯಕ್ಕೆ ಪೂರಕ ಸಲಹೆ ಸೂಚನೆಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾತನಾಡಿ, ಈಗಾಗಲೇ ದಲಿತ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ಪದಾಧಿಕಾರಿಗಳ ಸಲಹೆ ಸೂಚನೆಗಳನ್ನು ಪಡೆದು ವಿಸ್ತೃತವಾದ ವರದಿಯನ್ನು ಸಿದ್ದಪಡಿಸಲಾಗಿದೆ.
ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಸಿಎಂ, ಡಿಸಿಎಂ ಕೆಲವು ಪದಾಧಿಕಾರಿಗಳು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸುವಂತೆ ನೀಡಿದ ಸಲಹೆಯ ಮೇರೆಗೆ ಈ ಸಭೆಯನ್ನು ನಡೆಸಲಾಗಿದ್ದು, ಆಯವ್ಯಯಕ್ಕೆ ಪೂರಕವಾದ ಸಲಹೆ ಸೂಚನೆ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರರಾದ ಇ. ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಮಾಜಿ ಎಂಎಲ್ ಸಿ ಡಿ.ಎಸ್.ಈರಯ್ಯ, ಹಣಕಾಸು ಇಲಾಖೆಯ ಕಾರ್ಯದರ್ಶಿ ಜಾಫರ್, ಮುಖ್ಯಮಂತ್ರಿಗಳ ಸಲಹೆಗಾರ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಸೆಲ್ವಕುಮಾರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಿದರು.