ಕರ್ನಾಟಕ

karnataka

ETV Bharat / state

ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ : 30 ಲಕ್ಷ ರೂ. ಪರಿಹಾರ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ - CM announced Compensation

ಆತ್ಮಹತ್ಯೆ ಮಾಡಿಕೊಂಡ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಕುಟಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ರೂ. ಪರಿಹಾರ ಹಣವನ್ನು ಮಂಜೂರು ಮಾಡಲಾಗುವುದು ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

CM announced Compensation
ಪರಿಹಾರ ಘೋಷಿಸಿದ ಸಿಎಂ ಬಿಎಸ್​ವೈ

By

Published : Aug 20, 2020, 5:32 PM IST

ಬೆಂಗಳೂರು:ಆತ್ಮಹತ್ಯೆಗೆ ಶರಣಾದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಆರ್ ನಾಗೇಂದ್ರ ಅವರ ಕುಟುಂಬಕ್ಕೆ‌ 30 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ನಾಗೇಂದ್ರ ಅವರ ನಿಧನದ ವಿಷಯ ಕೇಳಿ ಅತೀವ ದುಃಖವಾಗಿದ್ದು, ಈ ಬಗ್ಗೆ ವಿಷಾದಿಸುತ್ತೇನೆ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ರೂ. ಪರಿಹಾರ ಹಣವನ್ನು ಮಂಜೂರು ಮಾಡಲಾಗುವುದು ಹಾಗೂ ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

ABOUT THE AUTHOR

...view details