ಬೆಂಗಳೂರು: ರಾಮನಗರದ ಬಳಿ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಹನುಮಂತು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ - raichuru reporter hanumanthu
ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಮೃತಪಟ್ಟಿದ್ದು, ಸಿಎಂ ಸಂತಾಪ ಸೂಚಿಸಿದ್ದಾರೆ. ಅಲ್ಲದೆ 5 ಲಕ್ಷ ರೂಪಾಯಿ ಪರಿಹಾರದ ಘೋಷಿಸಿದ್ದಾರೆ.
![ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ CM announces Rs 5 lakh compensation to journalist Hanumanthu family](https://etvbharatimages.akamaized.net/etvbharat/prod-images/768-512-6886318-577-6886318-1587480207012.jpg)
ಪತ್ರಕರ್ತ ಹನುಮಂತು ಕುಟುಂಬಕ್ಕೆ 5ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ
ಇತ್ತೀಚೆಗೆ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಇಂದು ನೀಡಲಾಗಿದೆ. ಕೆಲವರಿಗೆ ನೇರವಾಗಿ ಚೆಕ್ ನೀಡಿದರೆ, ಮತ್ತೆ ಕೆಲವರಿಗೆ ಪೋಸ್ಟ್ ಮೂಲಕ ಪರಿಹಾರದ ಚೆಕ್ ಕಳುಹಿಸಿಕೊಡಲಾಗಿದೆ.
ಇನ್ನು ಮೃತ ಪತ್ರಕರ್ತರ ಕುಟುಂಬ ವರ್ಗಕ್ಕೆ ಪರಿಹಾರ ನೀಡುವ ದಿನದಂದೇ ಮತ್ತೋರ್ವ ಪತ್ರಕರ್ತ ಕರ್ತವ್ಯನಿರತವಾಗಿರುವಾಗಲೇ ಅಪಘಾತದಿಂದ ಅಸುನೀಗಿದ್ದಕ್ಕೆ ಸಿಎಂ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.