ಕರ್ನಾಟಕ

karnataka

ETV Bharat / state

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ : ಸಿಎಂ ಬಿಎಸ್​ವೈ - ಮಾರ್ಚ್ ತಿಂಗಳಿನಲ್ಲಿ ರಾಜ್ಯ ಮುಂಗಡ ಬಜೆಟ್ ಮಂಡನೆ

CM announces the budget in the first week of March
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ

By

Published : Feb 10, 2021, 10:59 AM IST

Updated : Feb 10, 2021, 12:24 PM IST

10:51 February 10

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇವೆ. ದಿನಾಂಕ ಯಾವಾಗ ಅಂತ ಚರ್ಚೆ ಮಾಡಿ ನಿಗದಿ ಮಾಡುತ್ತೇವೆ. ಈಗಾಗಲೇ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ, ಇನ್ನೊಂದು ವಾರದಲ್ಲಿ ಬಜೆಟ್ ಸಭೆ ಪೂರ್ಣಗೊಳಿಸುತ್ತೇನೆ ಎಂದು ಸಿಎಂ ಸ್ಪಷ್ಟನೆ ನೀಡಿದರು.

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ರಾಜ್ಯ ಮುಂಗಡ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೆಂಗಲ್ ಹನುಮಂತಯ್ಯ 113 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಕೆಂಗಲ್ ಹನುಮಂತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಈ ವಿಷಯ ತಿಳಿಸಿದರು. ನಂತರ ಮಾತನಾಡಿದ ಸಿಎಂ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇವೆ. ದಿನಾಂಕ ಯಾವಾಗ ಅಂತ ಚರ್ಚೆ ಮಾಡಿ ನಿಗದಿ ಮಾಡುತ್ತೇವೆ. ಈಗಾಗಲೇ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ. ಇನ್ನೊಂದು ವಾರದಲ್ಲಿ ಬಜೆಟ್ ಸಭೆ ಪೂರ್ಣಗೊಳಿಸುತ್ತೇನೆ ಎಂದರು.

ಮೀಸಲಾತಿ ಹೋರಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಳಿ ಸಂವಿಧಾನ ಮತ್ತು ಕಾನೂನು ಚೌಕಟ್ಟಿನಲ್ಲಿ ಏನೇನು ಮಾಡಲು ಸಾಧ್ಯವಿದೆಯೋ ಅದನ್ನು ಮಾಡೋಣ, ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಇಡೀ‌ ದೇಶದಲ್ಲಿ ಏನೇನು ಮಾಡಿದ್ದಾರೆ ಅದನ್ನು ನಾನು ಇಲ್ಲಿ ಮಾಡಿದ್ದೇನೆ. ಅದಕ್ಕಾಗಿ ನಾವು ಕುಳಿತು ಚರ್ಚೆ ಮಾಡುತ್ತಾ ಇದ್ದೇವೆ, ಕಾನೂನು ತಜ್ಞರ ಜತೆ, ಪ್ರಮುಖರ ಜತೆ ಚರ್ಚೆ ಮಾಡಿ ಏನು ಮಾಡೋಕೆ‌ ಸಾಧ್ಯವೋ ಅದನ್ನು ಮಾಡುತ್ತೇವೆ ಎಂದು ಸಿಎಂ ಹೇಳಿದರು.

ಓದಿ : ‘ಬೆಂದ’ಕಾಳೂರಿನಲ್ಲಿ ಬಿಎಂಟಿಸಿ ನೌಕರರಿಂದ ಪ್ರತಿಭಟನೆ: ಪ್ರಯಾಣಿಕರಿಗೆ ತಟ್ಟಲಿದೆಯಾ ಬಸ್ ಮುಷ್ಕರದ​ ಎಫೆಕ್ಟ್?​

Last Updated : Feb 10, 2021, 12:24 PM IST

ABOUT THE AUTHOR

...view details