ಬೆಂಗಳೂರು: ಜುಲೈ 5 ರಿಂದ ರಾಜ್ಯದಲ್ಲಿ ಅನ್ಲಾಕ್ 3.O ಜಾರಿಗೆ ಬರಲಿದ್ದು, ಯಾವುದಕ್ಕೆಲ್ಲ ಹೊಸದಾಗಿ ಅವಕಾಶ ನೀಡಬೇಕು, ಯಾವುದಕ್ಕೆಲ್ಲ ನಿರ್ಬಂಧ ಸಡಿಲಿಕೆ ಮಾಡಬೇಕು ಎನ್ನುವ ಕುರಿತು ಕೋವಿಡ್ ಉಸ್ತುವಾರಿ ಸಚಿವರು ಹಾಗು ಹಿರಿಯ ಅಧಿಕಾರಿಗಳ ಜತೆ ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.
ನಾಳೆ ಸಂಜೆ 5.30ಕ್ಕೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಭೆ ನಡೆಸಲಿದ್ದು, ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಬಗ್ಗೆ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಯಾವೆಲ್ಲ ವರ್ಗಕ್ಕೆ ಲಾಕ್ಡೌನ್ ಸಡಿಲಿಕೆ ಮಾಡಬೇಕು ಎನ್ನುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ:Unlock 3.O: ನಾಳೆ ಚಿತ್ರಮಂದಿರ, ಮಾಲ್, ಸ್ವಿಮ್ಮಿಂಗ್ ಪೂಲ್ ಆರಂಭಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್?