ವೈದ್ಯರ ಸಲಹೆ ಮೇರೆಗೆ ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಸಿಎಂ ನನ್ನ ಸಂಪರ್ಕಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಹೋಂ ಕ್ವಾರಂಟೈನ್ ಆಗುವಂತೆಯೂ ಸಲಹೆ ನೀಡಿದ್ದಾರೆ.
ಸಿಎಂಗೆ ತಗುಲಿದ ಕೊರೊನಾ ಸೋಂಕು; ಮಣಿಪಾಲ್ ಆಸ್ಪತ್ರೆಗೆ ದಾಖಲು - Karnataka Chief Minister's Office
15:30 April 16
ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಆದ ಸಿಎಂ ಬಿಎಸ್‌ವೈ
13:39 April 16
ಜ್ವರದಿಂದ ಬಳಲುತ್ತಿದ್ದ ಸಿಎಂಗೆ ಸೋಂಕು ದೃಢ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡನೇ ಬಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರು ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಲಸಿಕೆಯ ಮೊದಲ ಲಸಿಕೆ ಪಡೆದ ನಂತರವೂ ಸಿಎಂ ಬಿಎಸ್‌ವೈ ಸೋಂಕಿಗೆ ಸಿಲುಕಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ಗೆ ಸಿಎಂ ಯಡಿಯೂರಪ್ಪ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ: ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ : ಸಿಎಂ ಬಿಎಸ್‌ವೈ ಮನವಿ
ಕೋವಿಡ್ ಮೊದಲ ಅಲೆ ವೇಳೆಯಲ್ಲಿಯೂ ಕೊರೊನಾ ಪಾಸಿಟಿವ್ ಆಗಿದ್ದ ಸಿಎಂ ಯಡಿಯೂರಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅದರಂತೆ ಈಗಲೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ನಾನು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ನನ್ನ ಸಂಪರ್ಕಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಜೊತೆಗೆ ಹೋಂ ಕ್ವಾರಂಟೈನ್ ಆಗುವಂತೆ ಎಂದು ಸಿಎಂ ಬಿಎಸ್‌ವೈ ಮನವಿ ಮಾಡಿಕೊಂಡಿದ್ದಾರೆ.