ಬೆಂಗಳೂರು:ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣದ ಕಾಲ ಕೂಡಿ ಬಂದಿದೆ. ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಲು ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಂಧ್ರಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಬುಧವಾರದ ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಯಡಿಯೂರಪ್ಪ ಸಂಜೆ 5 ಗಂಟೆಗೆ ವಿಶೇಷ ವಿಮಾನದ ಮೂಲಕ ತಿರುಪತಿಗೆ ತೆರಳುತ್ತಿದ್ದಾರೆ. ಸಂಜೆ 7.15ಕ್ಕೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ ರೆಡ್ಡಿ ಆಯೋಜಿಸಿರುವ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದು, ನಾಳೆ ತಿರುಪತಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.