ಬೆಂಗಳೂರು : ಹಿರಿಯ ಪತ್ರಕರ್ತ, ಬಹುಮುಖ ಪ್ರತಿಭೆ, ಟಿಎಸ್ಆರ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಮುತಾಲಿಕ್ ದೇಸಾಯಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತ ಮುತಾಲಿಕ್ ದೇಸಾಯಿ ನಿಧನ: ಸಿಎಂ ಸಂತಾಪ - ಪತ್ರಕರ್ತ ಮುತಾಲಿಕ್ ದೇಸಾಯಿ ನಿಧನ
ಹಿರಿಯ ಪತ್ರಕರ್ತ ಮುತಾಲಿಕ್ ದೇಸಾಯಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ಮುತಾಲಿಕ್ ದೇಸಾಯಿ ಅವರದ್ದು ಸಂಘ ಜೀವತ್ವ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಗೆ ಅವರು ಅಪಾರ ಕಾಳಜಿ ಹೊಂದಿದ್ದರು. ನೂರಾರು ಜನ ಯುವ ಪತ್ರಕರ್ತರಿಗೆ ಮಾರ್ಗದರ್ಶಿಯಾಗಿದ್ದರು. ಅವರ ನಿಧನದಿಂದ ಕನ್ನಡ ಪತ್ರಿಕಾ ಲೋಕ ಬಡವಾಗಿದೆ ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಕೋರಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ