ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಸಿಸಿ ಸಾರಥಿ ಡಿ ಕೆ ಶಿವಕುಮಾರ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಲು ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.
ಪ್ರಭಾವಿ ಸಚಿವರ ಸಹೋದರನ ಹೆಸರು ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕೇಳಿ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.