ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಯೋಗ ದಿನಾಚರಣೆಗೆ ಮೋದಿ ಚಾಲನೆ: ಪೂರ್ವಸಿದ್ಧತೆ ಸಭೆ ನಡೆಸಿದ ಸಿಎಂ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲ್​ಗುಂಬಜ್​ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ.

ಮೈಸೂರಿನಲ್ಲಿ ಯೋಗ ದಿನಾಚರಣೆಯ ಪೂರ್ವಸಿದ್ಧತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ
ಮೈಸೂರಿನಲ್ಲಿ ಯೋಗ ದಿನಾಚರಣೆಯ ಪೂರ್ವಸಿದ್ಧತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ

By

Published : Jun 7, 2022, 11:00 PM IST

ಬೆಂಗಳೂರು:ಆಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಮೈಸೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ.

ಮೈಸೂರಿನಲ್ಲಿ ಯೋಗ ದಿನಾಚರಣೆಯ ಪೂರ್ವಸಿದ್ಧತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ

ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ, ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ, ಕುಡಿವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು. ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ. ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆ ಸೂಚಿಸಿದರು.

ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು. ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ 5 ತಾಣಗಳಲ್ಲಿ ಯೋಗ ದಿನಾಚರಣೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್​ ಜೋಶಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಾಜ್​ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ. ಇದಲ್ಲದೇ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು.

ಓದಿ:ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ಬಗ್ಗೆ ಟೀಕೆ - ಟಿಪ್ಪಣಿ ಮಾಡಲ್ಲ: ಬಿಎಸ್​ವೈ

For All Latest Updates

TAGGED:

ABOUT THE AUTHOR

...view details