ಕರ್ನಾಟಕ

karnataka

ETV Bharat / state

ಲಸಿಕಾಕರಣ ಚುರುಕುಗೊಳಿಸಿ: ಜಿಲ್ಲಾಡಳಿತಗಳಿಗೆ ಸಿಎಂ ಬೊಮ್ಮಾಯಿ ಸೂಚನೆ - ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಬೀದರ್, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಲಸಿಕಾಕರಣದ ಕುರಿತು ಸಿಎಂ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಡಳಿತಗಳಿಗೆ ಸಿಎಂ ಸೂಚನೆ
ಜಿಲ್ಲಾಡಳಿತಗಳಿಗೆ ಸಿಎಂ ಸೂಚನೆ

By

Published : Jan 18, 2022, 5:25 PM IST

ಬೆಂಗಳೂರು: ಜನತೆಯಲ್ಲಿ ಜಾಗೃತಿ ಮೂಡಿಸುವ ಮೂಲಕ ರಾಜ್ಯದಲ್ಲಿ ಕೋವಿಡ್ ಲಸಿಕೆ ನೀಡಿಕೆಯನ್ನು ಮತ್ತಷ್ಟು ಚುರುಕುಗೊಳಿಸಲು ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಆರ್.ಟಿ ನಗರ ನಿವಾಸದಿಂದ ವರ್ಚುವಲ್ ಮೂಲಕ ಆಯ್ದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಆರೋಗ್ಯ ಸೌಧದಿಂದ ಆರೋಗ್ಯ ಸಚಿವ ಸುಧಾಕರ್ ಸಭೆಯಲ್ಲಿ ಭಾಗಿಯಾಗಿದ್ದರು.

ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಬೀದರ್, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಲಸಿಕಾಕರಣದ ಕುರಿತು ಸಿಎಂ ಪ್ರಗತಿ ಪರಿಶೀಲನೆ ನಡೆಸಿದರು.

ಜನತೆಯಲ್ಲಿ ಲಸಿಕೆ ಕುರಿತು ಜಾಗೃತಿ ಮೂಡಿಸಿ ಲಸಿಕೆ ನೀಡಬೇಕು, ಯಾರೆಲ್ಲಾ ಮೊದಲ ಡೋಸ್ ಲಸಿಕೆ ಪಡೆದು ಎರಡನೆ ಡೋಸ್ ಇನ್ನೂ ತೆಗೆದುಕೊಂಡಿಲ್ಲವೋ ಅವರಿಗೆ ಮಾಹಿತಿ ನೀಡಿ ಆಧ್ಯತೆ ಮೇರೆಗೆ ಲಸಿಕೆ ನೀಡಬೇಕು. ಲಸಿಕಾ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಿ, ಆದಷ್ಟು ಬೇಗ ಶೇ.100 ರಷ್ಟು ಪ್ರಮಾಣದಲ್ಲಿ ಅರ್ಹತೆಗೆ ತಕ್ಕಂತೆ ಲಸಿಕೆ ನೀಡುವ ಗುರಿ ತಲುಪುವಂತೆ ಮುನ್ನಡೆಯಿರಿ ಎಂದು ಜಿಲ್ಲಾಡಳಿತಗಳಿಗೆ ಸಿಎಂ ಸಲಹೆ ನೀಡಿದರು.

For All Latest Updates

TAGGED:

ABOUT THE AUTHOR

...view details