ಕರ್ನಾಟಕ

karnataka

ETV Bharat / state

ಹುಟ್ಟುಹಬ್ಬದ ನಿಮಿತ್ತ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ: ಶುಭಕೋರಿದ ಅಮಿತ್ ಶಾ - CM Basavaraj Bommai Perform Gau Puja for his birthday

CM Basavaraj Bommai birthday: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ನಿಮಿತ್ತ ಆರ್.ಟಿ ನಗರ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.

CM Basavaraj Bommai Performs Gau Pooja
ಹುಟ್ಟುಹಬ್ಬದ ಅಂಗವಾಗಿ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

By

Published : Jan 28, 2022, 9:54 AM IST

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ 'ಜೀರೋ ಟ್ರಾಫಿಕ್' ವ್ಯವಸ್ಥೆ ತ್ಯಜಿಸಿ ಸಿಂಪ್ಲಿಸಿಟಿ ಮೂಲಕ ಜನಮನ ಗೆದ್ದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋಪೂಜೆ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸಿಎಂಗೆ ಬಿಜೆಪಿ‌‌ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಶುಭ ಕೋರಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ತಮ್ಮ ಹುಟ್ಟುಹಬ್ಬದ ನಿಮಿತ್ತ ಸಿಎಂ ಬೊಮ್ಮಾಯಿ ತಮ್ಮ ಆರ್.ಟಿ ನಗರ ನಿವಾಸದಲ್ಲಿ ಕುಟುಂಬದ ಸದಸ್ಯರ ಜತೆಯಲ್ಲಿ ಗೋಪೂಜೆ ನೆರವೇರಿಸಿ ದೇಸಿ ಶೈಲಿಯಲ್ಲಿ ಸರಳವಾಗಿ ಹುಟ್ಟುಹಬ್ಬದ ಆಚರಣೆ ಮಾಡಿದರು. ಯಾವುದೇ ರೀತಿಯ ಅದ್ದೂರಿತನ, ಆಡಂಬರ, ಭಾಜಾ ಭಜಂತ್ರಿ, ಘೋಷಣೆಗಳಿಲ್ಲದೇ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡು ಗಮನ ಸೆಳೆದರು.

ಹುಟ್ಟುಹಬ್ಬದ ಅಂಗವಾಗಿ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಶುಭ ಹಾರೈಸಿದ ಅಮಿತ್ ಶಾ:ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆಯಲ್ಲಿ ಈ ಶುಭಕೋರಿಕೆ ಮಹತ್ವ ಪಡೆದುಕೊಂಡಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಶುಭ ಕೋರಿದರು. ಹುಟ್ಟುಹಬ್ಬದ ದಿನವೇ ಸರ್ಕಾರಕ್ಕೆ ಆರು ತಿಂಗಳಾಗುತ್ತಿದೆ. ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಪುಟ ಸಹೋದ್ಯೋಗಿಗಳು ಟ್ವೀಟ್​​ ಮೂಲಕ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ:'ಸಿಂಪಲ್ ಸಿಎಂ'ಗೆ ಹುಟ್ಟು ಹಬ್ಬದ ಸಂಭ್ರಮ: ಶುಭ ಕೋರಿದ ಬಿಎಸ್​ವೈ, ಕಟೀಲ್

For All Latest Updates

ABOUT THE AUTHOR

...view details