ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್ನಲ್ಲಿ ಹೊರಬರಲಾರದ ಪರಿಸ್ಥಿತಿ ಇದೆ. ನವೀನ್ ಮೃತದೇಹ ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.