ಬೆಂಗಳೂರು :ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ. ಈ ಸಂಬಂಧ ಮುಂದುವರೆದು ಖಾಸಗಿ ಶಾಲೆಗಳ ಅಸೋಸಿಯೇಷನ್ ಜೊತೆ ಮಾತುಕತೆ ನಡೆಸಿದ್ದೇನೆ. ಮತ್ತೆ ಅವರ ಸಂಘಟನೆ ಜೊತೆ ಚರ್ಚೆ ಮಾಡುತ್ತೇನೆ ಎಂದರು.