ಬೆಂಗಳೂರು:ಎರಡು ದಿನಗಳ ದೆಹಲಿ ಪ್ರವಾಸವು ಬಹಳ ಫಲಪ್ರದವಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಆರ್.ಟಿ.ನಗರದ ನಿವಾಸದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಉಪನಗರ ರಿಂಗ್ ರೋಡ್ ದಾಬಸ್ ಪೇಟೆಯಿಂದ ಹೊಸೂರುವರೆಗೆ ಭಾರತ್ ಮಾಲಾ ಮೊದಲನೇ ಯೋಜನೆಯಡಿ ಕೈಗೊಳ್ಳಲಾಗಿದೆ. ಅದರ ಭೂಸ್ವಾಧೀನ ವಿಚಾರದಲ್ಲಿದ್ದ ವಿವಾದವನ್ನು ಪರಿಹರಿಸಲಾಗಿದೆ.
ಆರು ತಿಂಗಳ ಒಳಗಾಗಿ ರಸ್ತೆ ನಿರ್ಮಾಣ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ಬಿಜಾಪುರ ಸಂಕೇಶ್ವರ ಹೈವೇ ವಿಸ್ತರಣೆಗೆ ಒಪ್ಪಿಕೊಂಡಿದ್ದಾರೆ. ಡಿಪಿಆರ್ ನಡೆಯುತ್ತಿದ್ದು, ಇದರೊಂದಿಗೆ ಇನ್ನೂ ನಾಲ್ಕು ಹೆದ್ದಾರಿಗಳನ್ನು ಭಾರತ್ ಮಾಲಾ ಎರಡನೇ ಹಂತದಲ್ಲಿ ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದರು.
ಶಿರಾಡಿಘಾಟ್ ರಸ್ತೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಶಿರಾಡಿಘಾಟ್ನಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಅದನ್ನು ಕೂಡ ಮಾಡಿಕೊಡುವುದಾಗಿ ಗಡ್ಕರಿ ಭರವಸೆ ಕೊಟ್ಟಿದ್ದಾರೆ. ಚತುಷ್ಪಥ ಮಾರ್ಗ ನಿರ್ಮಾಣದ ಬಗ್ಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.
ಎಲೆಕ್ಟ್ರಾನಿಕ್ ಹಾರ್ಡ್ವೇರ್ ಪಾರ್ಕ್:
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಗ್ರಾಮೀಣ ಸಂಪರ್ಕಕ್ಕೆ ವಿಶೇಷ ಕಾರ್ಯಕ್ರಮ ಮಾಡೋಣ, ಡಿಜಿಟೈಸೇಷನ್ ಆಫ್ ರೂರಲ್ ಮಾಡೋಣ. ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾತುಕತೆ ನಡೆಸಿ ಮುಂದುವರಿಯಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರ ಮಾರ್ಗದಲ್ಲಿ ಎಲೆಕ್ಟ್ರಾನಿಕ್ ಹಾರ್ಡ್ವೇರ್ ಪಾರ್ಕ್ ಅನ್ನು 400 ಎಕರೆ ಜಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ.
ಆಪ್ಟಿಕಲ್ ಫೈಬರ್ ಕೇಬಲ್ ಜಾಲವನ್ನು ವಿಸ್ತರಣೆ ಮಾಡುವ ಸಲುವಾಗಿ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಸ್ಕಿಲ್ ವಿಶ್ವವಿದ್ಯಾಲಯ ಮಾಡಬೇಕು ಎನ್ನುವ ಉದ್ದೇಶ ಅವರಿಗಿದೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದೇವೆ ಎಂದರು.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಜೊತೆ ಮಾತುಕತೆ ನಡೆಸಿದ್ದೇನೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 400 ಕೋಟಿ ರೂ.ಗಳನ್ನು ನಿನ್ನೆ ಬಿಡುಗಡೆ ಮಾಡಿದ್ದಾರೆ. ಇನ್ನು 1,500 ಕೋಟಿ ಬಿಡುಗಡೆಯಾಗಬೇಕು, ನಮ್ಮಿಂದ ಕೆಲ ವಿವರಣೆ ಕೊಡಬೇಕಿದೆ, ಅದಾದ ತಕ್ಷಣ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.
ಪ್ರಮುಖ ಮಾರ್ಗಗಳ ಬಗ್ಗೆ ಚರ್ಚೆ: