ಬೆಂಗಳೂರು:ಮತದಾರರ ಪಟ್ಟಿ ಅಕ್ರಮ ಸಂಬಂಧ ಕಾಂಗ್ರೆಸ್ ಆರೋಪ ನಿರಾಧಾರವಾಗಿದೆ. ಕಾಂಗ್ರೆಸ್ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದರು. ಎನ್ಜಿಓ ಬಿಎಲ್ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜಾಂಶ ಹೊರಗೆ ಬರಲಿ ಎಂದರು.