ಕರ್ನಾಟಕ

karnataka

ETV Bharat / state

ಶಿವಮೊಗ್ಗ ಚಾಕು ಇರಿತ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ - etv bharat kannada

ಶಿವಮೊಗ್ಗದಲ್ಲಿ ನಡೆದ ಚಾಕು ಇರಿತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

Etv Bharatcm-basavaraj-bommai-reaction-shivamogga-knife-stab-case
Etv Bharatಶಿವಮೊಗ್ಗ ಚಾಕು ಇರಿತ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

By

Published : Aug 15, 2022, 11:01 PM IST

ಬೆಂಗಳೂರು:ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ-2022ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್​ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇದನ್ನೂ ಓದಿ:ಸಾವರ್ಕರ್ ಫ್ಲೆಕ್ಸ್ ತೆರವು ಗಲಾಟೆ: ನಾಳೆ ಶಿವಮೊಗ್ಗ, ಭದ್ರಾವತಿಯ ಶಾಲೆ ಕಾಲೇಜುಗಳಿಗೆ ರಜೆ

ABOUT THE AUTHOR

...view details