ಬೆಂಗಳೂರು:ಪಕ್ಷದಲ್ಲಿ ಬದಲಾವಣೆ ಆಗುತ್ತದೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇದೆ. ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಜ್ಯ ಬಿಜೆಪಿಯ ವಿಚಾರಗಳೆಲ್ಲವನ್ನೂ ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ಏನೆಲ್ಲ ಚರ್ಚೆ ಆಗುತ್ತಿದೆಯೋ ಎಲ್ಲವನ್ನೂ ಹೈಕಮಾಂಡ್ ನೋಡುತ್ತಿದೆ, ಯಾವುದೇ ತೊಂದರೆ ಇಲ್ಲ. ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಕೊಡುತ್ತೇವೆ. ನಮ್ಮ ಕೆಲಸಗಳನ್ನು ಮುಂದಿಟ್ಟುಕೊಂಡು ನಾವು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.
ಮಾಧ್ಯಮಗಳ ಮೇಲೆ ಸಿಎಂ ಗರಂ:
ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚಿಸುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಗರಂ ಆದ ಸಿಎಂ, ಸಂಪುಟ ಪುನಾರಚನೆ ಮಾಧ್ಯಮ ಸೃಷ್ಟಿಯಾಗಿದೆ. ಪುನಾರಚನೆ ಆಗುವ ವಿಚಾರ ನಮಗೆ ಗೊತ್ತಿಲ್ಲ, ನಾವು ಪಕ್ಷದಲ್ಲಿ ಏನು ಚರ್ಚೆ ಮಾಡುತ್ತೇವೆ, ಏನು ರಾಜಕಾರಣ ಮಾಡುತ್ತೇವೆ ಅಂತ ನಿಮಗೆ ಹೇಳುವ ಅಗತ್ಯವಿಲ್ಲ. ಯಾವ ಸಂದರ್ಭದಲ್ಲಿ ಏನು ಚರ್ಚೆ ಮಾಡಬೇಕೋ ಮಾಡುತ್ತೇವೆ, ಅದು ನಮ್ಮ ಪಕ್ಷದ ಆಂತರಿಕ ವಿಚಾರ ಎಂದು ಹೇಳಿದರು.
ಜಾರಕಿಹೊಳಿ ವಿರುದ್ಧ ಕ್ರಮದ ಸುಳಿವು:
ಶಾಸಕ ರಮೇಶ್ ಜಾರಕಿಹೊಳಿ ವಿರುದ್ದದ ಕ್ರಮ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಎಲ್ಲವೂ ಪಕ್ಷದ ಹೈಕಮಾಂಡ್ ಗಮನದಲ್ಲಿದೆ. ತಾವು ಕೇಳುವಂತಹ ಎಲ್ಲವೂ ಕೂಡ ಪಕ್ಷದ ಹೈಕಮಾಂಡ್ ನೋಡುತ್ತಿದೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ದ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದರು.
ಹೊಸ ವರ್ಷಕ್ಕೆ ಎಲ್ಲಾದರೂ ಹೋಗಿ ಆದ್ರೆ ನಿಯಮ ಪಾಲಿಸಿ: