ಕರ್ನಾಟಕ

karnataka

ETV Bharat / state

ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆ ಎದುರಿಸಲಿದ್ದೇವೆ: ಸಿಎಂ ಬೊಮ್ಮಾಯಿ - ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ

ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ, ಅಭ್ಯರ್ಥಿಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ಕೊಡಲಿದ್ದೇವೆ, ಅಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಸ್ಥಳೀಯ ನಾಯಕರಿಂದ ಅಭಿಪ್ರಾಯ ಪಡೆದು ನಂತರ ಅಂತಿಮ ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ

By

Published : Sep 28, 2021, 11:58 AM IST

Updated : Sep 28, 2021, 12:50 PM IST

ಬೆಂಗಳೂರು: ನನ್ನ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸುವುದಿಲ್ಲ, ಪಕ್ಷದ ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಲಿದ್ದು, ಹಾನಗಲ್ ಮತ್ತು ಸಿಂದಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ

ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ, ಅಭ್ಯರ್ಥಿಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ಕೊಡಲಿದ್ದೇವೆ, ಅಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಸ್ಥಳೀಯ ನಾಯಕರಿಂದ ಅಭಿಪ್ರಾಯ ಪಡೆದು ನಂತರ ಅಂತಿಮ ತೀರ್ಮಾನ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಅಲ್ಲಲ್ಲಿ ಮತಾಂತರದ ಘಟನೆ ನಡೆಯುತ್ತಿದೆ, ಇಂಥ ಅವಕಾಶ ಕೊಡದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಲವಂತದ ಮತಾಂತರ ತಡೆಯಲು ಕಾನೂನು ತರುತ್ತೇವೆ ಎಂದು ಯಾದಗಿರಿ ಮತ್ತು ಬೆಂಗಳೂರಿನ ಬ್ಯಾಡರಹಳ್ಳಿಗಳಲ್ಲಿ ಮತಾಂತರ ಆರೋಪಗಳ ಹಿನ್ನೆಲೆ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.

Last Updated : Sep 28, 2021, 12:50 PM IST

ABOUT THE AUTHOR

...view details