ಕರ್ನಾಟಕ

karnataka

ETV Bharat / state

ಗಡಿ ವಿವಾದ: ದೇವೇಂದ್ರ ಫಡ್ನವೀಸ್ ಕನಸು ನನಸಾಗಲ್ಲ ಎಂದ ಸಿಎಂ ಬೊಮ್ಮಾಯಿ‌ - etv bharat kannada

ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಟ್ವೀಟ್​ ಮಾಡಿದ್ದಾರೆ.

CM basavaraj bommai tweet on karnataka maharashtra border dispute
ಗಡಿ ವಿವಾದ: ದೇವೇಂದ್ರ ಫಡ್ನವೀಸ್ ಕನಸು ನನಸಾಗಲ್ಲ ಎಂದ ಸಿಎಂ ಬೊಮ್ಮಾಯಿ‌

By

Published : Nov 23, 2022, 10:36 PM IST

ಬೆಂಗಳೂರು:ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ. ಮಹಾರಾಷ್ಟ್ರ ಸರ್ಕಾರ 2004ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್​​ನಲ್ಲಿ ದಾವೆ ಹೂಡಿದೆ.

ಇದುವರೆಗೂ ಅದು ಯಶಸ್ವಿಯಾಗಿಲ್ಲ, ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ಧರಾಗಿದ್ದೇವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಫಡ್ನವೀಸ್​ ಹೇಳಿಕೆ:ಮಹಾರಾಷ್ಟ್ರದ ಜತ್​ ತಾಲೂಕನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ ಬಳಿಕ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಇಲ್ಲಿನ ಒಂದು ಸಣ್ಣ ಹಳ್ಳಿಯೂ ಕೂಡ ಆ ರಾಜ್ಯಕ್ಕೆ ಸೇರಲು ಬಿಡುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ:ಮಹಾರಾಷ್ಟ್ರದ ಸಣ್ಣ ಹಳ್ಳಿಯೂ ಕರ್ನಾಟಕಕ್ಕೆ ಸೇರಲು ಬಿಡಲ್ಲ: ದೇವೇಂದ್ರ ಫಡ್ನವೀಸ್​

ಮಹಾರಾಷ್ಟ್ರ ಸರ್ಕಾರ ರಾಜ್ಯದ ಸಮಗ್ರತೆಗೆ ಬದ್ಧವಾಗಿದೆ. ಇಲ್ಲಿನ ಯಾವೊಂದು ಜಾಗವೂ ಕರ್ನಾಟಕಕ್ಕೆ ಸೇರಲು ಬಿಡುವುದಿಲ್ಲ. ಮರಾಠಿ ಭಾಷಿಕರು ಇರುವ ಬೆಳಗಾವಿ ಮಾತ್ರವಲ್ಲದೇ, ಕಾರವಾರ, ನಿಪ್ಪಾಣಿಯ ಗ್ರಾಮಗಳ ಸೇರ್ಪಡೆಗೆ ನಮ್ಮ ಸರ್ಕಾರ ಹೋರಾಟ ಮಾಡಲಿದೆ ಎಂದಿದ್ದರು.

ಇದನ್ನೂ ಓದಿ:ಗಡಿ ವಿವಾದ ಇತ್ಯರ್ಥಕ್ಕೆ ಸರ್ಕಾರ ತಕ್ಷಣ ಪ್ರತಿಪಕ್ಷ ನಾಯಕರನ್ನೂ ಒಳಗೊಂಡ ಸಲಹಾ ಸಮಿತಿ ರಚಿಸಲಿ: ಸಿದ್ದರಾಮಯ್ಯ

ABOUT THE AUTHOR

...view details