ಬೆಂಗಳೂರು:ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭ ದಕ್ಷಿಣ ಭಾರತದಿಂದ ಏಕೈಕ ಸ್ತಬ್ಧಚಿತ್ರ ರಾಜ್ಯದಿಂದ ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಸಂತಸ ಹಂಚಿಕೊಂಡಿರುವ ಅವರು, "ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ" ಎಂದಿದ್ದಾರೆ.