ಬೆಂಗಳೂರು: ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಸಮೀಪದ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಜೆಟ್ ಮಂಡನೆಗೂ ಮುನ್ನ ಶ್ರೀಕಂಠೇಶ್ವರ, ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸಿಎಂ ಭೇಟಿ, ವಿಶೇಷ ಪೂಜೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಶ್ರೀಕಂಠೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಬಜೆಟ್ ಮಂಡನೆ
ದೇವಾಲಯದ ಹೊರಗೆ ಮುಖ್ಯಮಂತ್ರಿಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಗಳನ್ನ ಆಲಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಸಿ.ಸಿ ಪಾಟೀಲ್, ಬೈರತಿ ಬಸವರಾಜ, ಶಾಸಕರಾದ ಬಿ.ಜಿ ಪಾಟೀಲ್ ಉಪಸ್ಥಿತರಿದ್ದರು.
ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ: ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಕ್ಕೂ ಸಹ ಮುಖ್ಯಮಂತ್ರಿ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ವೇಳೆ ಸಮಸ್ತ ರಾಜ್ಯದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
Last Updated : Mar 4, 2022, 11:50 AM IST