ಬೆಂಗಳೂರು:ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದರು.
ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಸ್ಪಷ್ಟಪಡಿಸಿದರು.