ಬೆಂಗಳೂರು: ಬೆಲೆ ಏರಿಕೆ ಅಥವಾ ಇಳಿಕೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಗೆ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸಾದ ಬಳಿಕ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದವರು ತೈಲ ಬೆಲೆ ಇಳಿಕೆಗೆ ಟೀಕೆ ಮಾಡ್ತಾ ಇದ್ದಾರೆ. ಅನೇಕರು ಹೇಳ್ತಾರೆ, ಉಪ ಚುನಾವಣೆಯಲ್ಲಿ ಸೋತಿದ್ದಕ್ಕೆ ಮಾಡಿದ್ರು ಅಂತ. ಚುನಾವಣೆಗೂ ಮುನ್ನ ಮಾಡಿದ್ದರೂ ಟೀಕೆ ಮಾಡ್ತಾ ಇದ್ರು. ಟೀಕೆ ಮಾಡಬೇಕು ಅಂತ ಮಾಡಬಾರದು ಎಂದು ಕಿಡಿಕಾರಿದರು.
ಇದೇ ಮೊದಲ ಬಾರಿಗೆ ತೈಲಕ್ಕೆ 7 ರೂಪಾಯಿ ಕಡಿಮೆ ಆಗಿದೆ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಿ. ಟೀಕೆ ಮಾಡಬೇಕು ಅಂತ ಮಾಡೋದಲ್ಲ. ಅವರ ಸರ್ಕಾರ ಇದ್ದಾಗ ಅವರು ಬೆಲೆ ಕಡಿಮೆ ಮಾಡಿಲ್ಲ. ಕಾಂಗ್ರೆಸ್ ಆಡಳಿತ ಇರೋ ರಾಜ್ಯಗಳಲ್ಲಿ ಅವರು ಬೆಲೆ ಕಡಿಮೆ ಮಾಡಲು ನಿರಾಕರಿಸಿದ್ದಾರೆ. ಇದು ಅವರ ಪಕ್ಷದ ನಿಲುವಾ ಹಾಗಾದ್ರೆ?. ಸಿಲಿಂಡರ್ ಬೆಲೆ ಕಡಿಮೆ ಮಾಡುವ ವಿಚಾರವಾಗಿ ಕೇಂದ್ರ ನಿರ್ಧಾರ ಮಾಡುತ್ತದೆ ಎಂದರು.
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಹಾನಿ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು, ಬಿಬಿಎಂಪಿ ಹಿರಿಯ ಅಧಿಕಾರಿಗಳಿಂದ ಮಳೆಯಿಂದ ಆದ ಹಾನಿಯ ಬಗ್ಗೆ ವಿವರ ಪಡೆಯುತ್ತೇನೆ ಎಂದು ಸಿಎಂ ತಿಳಿಸಿದರು.
ಓದಿ:ದೇಶದಲ್ಲಿ ಕಾಂಗ್ರೆಸ್ ಒಡೆದು ಹೋಳಾಗುತ್ತಿದೆ: ಡಿಕೆಶಿಗೆ ಟಾಂಗ್ ಕೊಟ್ಟ ಸಿಎಂ